ADVERTISEMENT

ಅಪಾರ್ಟ್‌ಮೆಂಟ್‌ ಮಾರಾಟಕ್ಕೆ ಅನುಮತಿ ಪ್ರಶ್ನಿಸಿ ಮೇಲ್ಮನವಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 20:57 IST
Last Updated 8 ಏಪ್ರಿಲ್ 2022, 20:57 IST

ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ ತನ್ನ ಅಪಾರ್ಟ್‌ಮೆಂಟ್ ಮಾರಾಟಕ್ಕೆ ವಿಶೇಷ ನ್ಯಾಯಾಲಯ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಐ-ಮಾನಿಟರಿ ಅಡ್ವೈಸರಿ (ಐಎಂಎ) ಹಗರಣದ ಪ್ರಮುಖ ಆರೋಪಿ ಮೊಹಮ್ಮದ್ ಮನ್ಸೂರ್‌ ಖಾನ್ ಹೈಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಠೇವಣಿದಾರರ ಹಿತರಕ್ಷಣಾ ಕಾಯ್ದೆಯಡಿ ನೇಮಕಗೊಂಡಿರುವ ಸಕ್ಷಮ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಲು ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ.

ಬೆಂಗಳೂರಿನ ತಿಲಕ್ ನಗರದ ಬನ್ನೇರುಘಟ್ಟ ರಸ್ತೆ ಲೇ ಔಟ್‌ನಲ್ಲಿ ಮನ್ಸೂರ್ ಖಾನ್ 2014 ರಲ್ಲಿ
ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತರಕ್ಷಣಾ ಕಾಯ್ದೆ (ಕೆಪಿಐಡಿಎಫ್ ಇ) 2004ರ ಅನುಸಾರ ಈ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೆಪಿಐಡಿಎಫ್‌ಇ ಪ್ರಕರಣಗಳಿಗಾಗಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯ 2022 ರ ಮಾರ್ಚ್ 7 ರಂದು ಆದೇಶಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.