ADVERTISEMENT

ಕಳ್ಳತನ: ಕೆಲಸಕ್ಕಿದ್ದ ಮಹಿಳೆ ಸೆರೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 19:45 IST
Last Updated 30 ಏಪ್ರಿಲ್ 2022, 19:45 IST

ಬೆಂಗಳೂರು: ಮಾರತ್ತಹಳ್ಳಿ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ಫ್ಲ್ಯಾಟ್‌ನಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಸುಮಾ (40) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸುಮಾ, ಕೆಲಸ ಹುಡುಕಿಕೊಂಡು ಪತಿ ಹಾಗೂ ಮಗನ ಜೊತೆ ನಗರಕ್ಕೆ ಬಂದಿದ್ದರು. ಪತಿ ಆರೋಗ್ಯ ಸಮಸ್ಯೆಯಿಂದಾಗಿ ಮನೆಯಲ್ಲೇ ಇರುತ್ತಿದ್ದರು. ಮನೆ ಕೆಲಸಕ್ಕೆ ಹೋಗುತ್ತಿದ್ದ ಸುಮಾ, ಅದರ ದುಡಿಮೆಯಲ್ಲೇ ಜೀವನ ನಡೆಸುತ್ತಿದ್ದರು.

‘ಮಗನಿಗೆ ಐ–ಫೋನ್ ಕೊಡಿಸಬೇಕು ಹಾಗೂ ಐಷಾರಾಮಿ ಜೀವನ ನಡೆಸಲು ಸುಮಾ, ಕಳ್ಳತನ ಮಾಡಲು ಯೋಚಿಸಿದ್ದರು. ಕೆಲಸ ಮಾಡುತ್ತಿದ್ದ ಫ್ಲ್ಯಾಟ್‌ನಲ್ಲೇ ವಜ್ರದ ಆಭರಣ ಹಾಗೂ ಚಿನ್ನಾಭರಣ ಕದ್ದಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.