ಬೆಂಗಳೂರು: ಬಿಎನ್‌ಆರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ನಾಲ್ಕನೇ ಶಾಖೆ ಮಾರತ್‌ಹಳ್ಳಿಯಲ್ಲಿ ಭಾನುವಾರ ಆರಂಭಗೊಂಡಿತು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ನಟಿ ಸಪ್ತಮಿ ಗೌಡ ಅವರು ಈ ನೂತನ ಶೋ ರೂಂ ಅನ್ನು ಉದ್ಘಾಟಿಸಿದರು. ‘ಬಿಎನ್‌ಆರ್ ಜ್ಯುವೆಲ್ಲರಿ ವಿಶಿಷ್ಟ ವಿನ್ಯಾಸಗಳು, ಉತ್ತಮ ಗುಣಮಟ್ಟ ಮತ್ತು ವಿಶ್ವಾಸಾರ್ಹ ಸೇವೆಗಳೊಂದಿಗೆ ವಜ್ರ ಪ್ರಿಯರ ಕನಸುಗಳನ್ನು ನನಸಾಗಿಸುವುದನ್ನು ಮುಂದುವರಿಸಬೇಕು ಮತ್ತು ಆ ಮೂಲಕ ಗ್ರಾಹಕರ ವಿಶ್ವಾಸವನ್ನು ಗಳಿಸಬೇಕು’ ಎಂದು ಹಾರೈಸಿದರು.
‘ಗ್ರಾಹಕರಿಗೆ ಪ್ರಾಮಾಣಿಕ ಸೇವೆ, ವಿಶ್ವಾಸಾರ್ಹ ಗುಣಮಟ್ಟ ಮತ್ತು ಆಕರ್ಷಕ ಬೆಲೆಯನ್ನು ಒದಗಿಸುವುದು ನಮ್ಮ ಬದ್ಧತೆಯಾಗಿದೆ’ ಎಂದು ಬಿಎನ್‌ಆರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವ್ಯವಸ್ಥಾಪಕ ನಿರ್ದೇಶಕ ರೋಹಿತ್ ಚರಣ್ ರೆಡ್ಡಿ ಮತ್ತು ಅಧ್ಯಕ್ಷ ನಾಗಿ ರೆಡ್ಡಿ ತಿಳಿಸಿದರು.
ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಚಿವ ಎಚ್. ನಾಗೇಶ್, ಬಿಜೆಪಿಯ ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಮೋಹನ್ ರೆಡ್ಡಿ, ಬಿಜೆಪಿ ಮುಖಂಡರಾದ ರಮೇಶ್ ರೆಡ್ಡಿ, ವೆಂಕಟಸ್ವಾಮಿ ರೆಡ್ಡಿ, ಲೋಕನಾಥ ರೆಡ್ಡಿ, ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಬಸವರಾಜು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.