
ಪ್ರಜಾವಾಣಿ ವಾರ್ತೆ
ಪೀಣ್ಯ ದಾಸರಹಳ್ಳಿ: ಉತ್ತರ ಸೋಲದೇವನಹಳ್ಳಿ ರೈಲ್ವೆ ಹಳಿ ಮೇಲೆ 40 ವರ್ಷ ಅಂದಾಜಿನ ಪುರುಷನ ಮೃತದೇಹ ಪತ್ತೆಯಾಗಿದ್ದು, ಕೊಲೆಯ ಶಂಕೆಯ ವ್ಯಕ್ತವಾಗಿದೆ.
ಮೃತದೇಹವು ಛಿದ್ರಗೊಂಡಿದೆ. ಮೃತದೇಹದ ಗುರುತು ಪತ್ತೆಯಾಗಿಲ್ಲ.
‘ರಾತ್ರಿ ವೇಳೆ ರೈಲ್ವೆ ಹಳಿ ದಾಟುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿರಬಹುದು ಅಥವಾ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ತಂದು ರೈಲ್ವೆ ಹಳಿಯ ಮೇಲೆ ಎಸೆದು ಹೋಗಿರಬಹುದು. ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತಿದೆ’ ಎಂದು ರೈಲ್ವೆ ಪೊಲೀಸರು ಹೇಳಿದರು.
‘ಕೆಲವು ಭಾಗದ ಸಿ.ಸಿ.ಟಿ.ವಿ. ಕ್ಯಾಮೆರಾಗಳ ಪರಿಶೀಲನೆ ನಡೆಸಲಾಗಿದೆ. ಆದರೆ, ಯಾವುದೇ ಸುಳಿವು ಲಭಿಸಿಲ್ಲ’ ಎಂದು ಪೊಲೀಸರು ಹೇಳಿದರು. ಸ್ಥಳಕ್ಕೆ ಯಶವಂತಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.