ಪೀಣ್ಯ ದಾಸರಹಳ್ಳಿ: ಸೋಲದೇವನಹಳ್ಳಿಯಲ್ಲಿರುವ ಆಚಾರ್ಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶ್ರೇಯಸ್ (33) ಅವರ ಮೃತದೇಹವು ಕೆರೆಗುಡ್ಡದಹಳ್ಳಿಯ ನಿವಾಸದಲ್ಲಿ ಬುಧವಾರ ಪತ್ತೆಯಾಗಿದೆ.
ಶ್ರೇಯಸ್ ಅವರು ಪಶ್ಚಿಮ ಬಂಗಾಳ ಮೂಲದವರು. ನಿವೃತ್ತ ಐಎಎಸ್ ಅಧಿಕಾರಿ ಶಶಾಂಕ್ ಅವರ ಪುತ್ರ.
ಆಚಾರ್ಯ ಕಾಲೇಜಿನ ಮನಃಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಶ್ರೇಯಸ್ ಅವರು ಕೆಲಸ ಮಾಡುತ್ತಿದ್ದರು.
‘ಮೂರು ದಿನವಾದರೂ ಮನೆಯ ಬಾಗಿಲು ತೆರೆಯದೇ ಇದ್ದಾಗ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಕೊಠಡಿಯ ಬಾಗಿಲು ತೆರೆದು ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ಇದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ಕಾರಣ ಗೊತ್ತಾಗಲಿದೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.