ADVERTISEMENT

ಬೆಂಗಳೂರು: ಅನುಮಾನಾಸ್ಪದ ಸೂಟ್‌ಕೇಸ್‌ನಲ್ಲಿ ಬಾಂಬ್ ಶಂಕೆ– ಸ್ಥಳೀಯರಲ್ಲಿ ಆತಂಕ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 8:54 IST
Last Updated 13 ಅಕ್ಟೋಬರ್ 2021, 8:54 IST
   

ಬೆಂಗಳೂರು: ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನದಲ್ಲಿ ಅನುಮಾನಾಸ್ಪದ ಸೂಟ್‌ಕೇಸ್ ಪತ್ತೆಯಾಗಿದೆ. ಅದರಲ್ಲಿ ಬಾಂಬ್ ಇರಬಹುದೆಂದು ಶಂಕಿಸಲಾಗಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಆವರಿಸಿದೆ.

ಕಪ್ಪು ಬಣ್ಣದ ಸೂಟ್‌ಕೇಸ್ ಪತ್ತೆಯಾಗಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT