ADVERTISEMENT

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ, ಆತಂಕ

​ಪ್ರಜಾವಾಣಿ ವಾರ್ತೆ
Published 31 ಮೇ 2019, 7:28 IST
Last Updated 31 ಮೇ 2019, 7:28 IST
   

ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪಟ್ನಾ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರು ದಿಕ್ಕಾಪಾಲಾಗಿ ಓಡಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಒಂದನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್‌ ರೈಲು ಹೊರಡಲು ಸಿದ್ಧವಾಗಿರುವಾಗ ವ್ಯಕ್ತಿಯೊಬ್ಬರು ಬಾಂಬ್‌ ಇರುವುದಾಗಿ ಕೂಗಿಕೊಂಡರು. ಇದರಿಂದ ಅಕ್ಕಪಕ್ಕದ ಬೋಗಿಗಳಲ್ಲಿದ್ದ ಪ್ರಯಾಣಿಕರು ಭಯಗೊಂಡು ಕೆಳಗಿಳಿದು ಓಡಲಾರಂಭಿಸಿದರು. ವಿಷಯ ತಿಳಿದ ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಎಲ್ಲ ಪ್ರಯಾಣಿಕರನ್ನು ಸುಗಮವಾಗಿ ಇಳಿಸಲು ನೆರವಾದರು.

ನಂತರ ಬಾಂಬ್‌ ನಿಷ್ಕ್ರಿಯದಳ ಅಧಿಕಾರಿಗಳು ಹಾಗೂಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಗ್ರೆನೇಡ್‌ ಮಾದರಿಯ ಅನುಮಾನಾಸ್ಪದ ವಸ್ತುವೊಂದು ಮರಳು ತುಂಬಿದ ಚೀಲಗಳ ಮಧ್ಯೆ ಇರುವುದು ಪತ್ತೆಯಾಯಿತು. ಕೂಡಲೆ ಅದನ್ನು ವಶಕ್ಕೆ ಪಡೆದ ಪೊಲೀಸರು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ADVERTISEMENT

ಇದು ಕಂಟ್ರಿ ಮೇಡ್ ಗ್ರೆನೇಡ್ ಮಾದರಿ ವಸ್ತುವಾಗಿದ್ದು, ಇದನ್ನು ಯಾರು ತಂದು ಇಟ್ಟಿದ್ದಾರೆ ಎಂಬುದರ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ರೈಲು ನಿಲ್ದಾಣದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು ಪೊಲೀಸರು ಸಿಸಿಟಿವಿ ವಿವರಗಳನ್ನು ಸಂಗ್ರಹಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.ಸ್ಥಳಕ್ಕೆ ರೈಲ್ವೆ ಎಸ್ಪಿ, ಎಡಿಜಿಪಿ, ಆರ್ ಎಎಫ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.