ADVERTISEMENT

ರಾಜಭವನಕ್ಕೆ ಬಾಂಬ್ ಬೆದರಿಕೆ: ಆರೋಪಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2023, 13:15 IST
Last Updated 12 ಡಿಸೆಂಬರ್ 2023, 13:15 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಜಭವನಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಕೇಂದ್ರ ವಿಭಾಗದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ದೊಮ್ಮಲೂರಿನ ನಿಯಂತ್ರಣ ‌ಕೊಠಡಿಗೆ ಸೋಮವಾರ ರಾತ್ರಿ 11.30ರ ಸುಮಾರಿಗೆ ಕರೆ‌ ಮಾಡಿದ್ದ ಆರೋಪಿ, ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಸಿದ್ದ. ಮಾಹಿತಿ‌ ಗೊತ್ತಾಗುತ್ತಿದ್ದಂತೆ ಸ್ಥಳೀಯ ‌ಪೊಲೀಸರು ರಾಜಭವನಕ್ಕೆ ‌ಭೇಟಿ ನೀಡಿ ರಾತ್ರಿಯಿಡೀ ಶೋಧ ನಡೆಸಿದ್ದರು. ಇದೊಂದು ಹುಸಿ ಬೆದರಿಕೆಯೆಂದು ಘೋಷಿಸಿದ್ದರು.

ADVERTISEMENT

‘ಬೆದರಿಕೆ ಕರೆ ಮಾಡಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು. ಆರೋಪಿಯೊಬ್ಬನನ್ನು ಗುರುತಿಸಲಾಗಿದೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದೆ. ಯಾವ ಕಾರಣಕ್ಕೆ ಕರೆ ಮಾಡಿದ್ದನೆಂಬುದು ಗೊತ್ತಾಗಿಲ್ಲ. ವಿಚಾರಣೆ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.