ಬೆಂಗಳೂರು: ಡಿ.ಜೆ. ಹಳ್ಳಿ ಗಲಭೆ ಹಾಗೂ ಡ್ರಗ್ಸ್ ಜಾಲ ಪ್ರಕರಣದ ಆರೋಪಿಗಳನ್ನು ಬಿಡುಗಡೆ ಮಾಡಬೇಕೆಂದು ಬೇಡಿಕೆ ಇಟ್ಟು ಅಪರಿಚಿತನೊಬ್ಬ ಬಾಂಬ್ ಬೆದರಿಕೆ ಹಾಕಿದ್ದು, ಈ ಸಂಬಂಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಎರಡೂ ಪ್ರಕರಣಗಳನ್ನು ಉಲ್ಲೇಖಿಸಿ ಬೆದರಿಕೆ ಪತ್ರ ಬಂದಿದೆ. ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚು ಮಾಹಿತಿ ಸದ್ಯಕ್ಕೆ ಬಹಿರಂಗಪಡಿಸಲಾಗದು’ ಎಂದು ಸಿಸಿಬಿ ಜಂಟಿ ಕಮಿಷನರ್ ಸಂಜೀವ್ ಪಾಟೀಲ ತಿಳಿಸಿದರು.
ಪೊಲೀಸ್ ಕಮಿಷನರ್ ಕಚೇರಿ ಹಾಗೂ ನ್ಯಾಯಾಲಯಕ್ಕೆ ಬೆದರಿಕೆ ಪತ್ರ ಬಂದಿರುವುದಾಗಿ ಗೊತ್ತಾಗಿದೆ. ‘ಡಿ.ಜೆ.ಹಳ್ಳಿ ಗಲಭೆ ಹಾಗೂ ಡ್ರಗ್ಸ್ ಜಾಲ ಪ್ರಕರಣದ ಆರೋಪಿಗಳು ಅಮಾಯಕರು. ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಿ. ಇಲ್ಲದಿದ್ದರೆ, ಬಾಂಬ್ ಇಡುತ್ತೇವೆ’ ಎಂದು ಪತ್ರದಲ್ಲಿ ಬರೆದಿರುವುದಾಗಿ ಗೊತ್ತಾಗಿದೆ. ತುಮಕೂರಿನ ವಿಳಾಸದಿಂದ ಪತ್ರ ಬಂದಿರುವ ಮಾಹಿತಿ ಇದ್ದು, ಅದನ್ನು ಆಧರಿಸಿ ಸಿಸಿಬಿ ಪೊಲೀಸರು ಆರೋಪಿ ಬಂಧನಕ್ಕೆ ಕಾರ್ಯಾಚರಣೆ ಆರಭಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.