ADVERTISEMENT

ಮಿಲಿಟರಿ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಸಂದೇಶ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2024, 16:15 IST
Last Updated 18 ಸೆಪ್ಟೆಂಬರ್ 2024, 16:15 IST
<div class="paragraphs"><p>ಬಾಂಬ್ ಬೆದರಿಕೆ</p></div>

ಬಾಂಬ್ ಬೆದರಿಕೆ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ನಗರದ ಜಾನ್ಸನ್‌ ಮಾರುಕಟ್ಟೆ ಬಳಿ ಮಿಲಿಟರಿ ಕಾಂಪೌಂಡ್‌ನಲ್ಲಿ ಇರುವ ರಾಷ್ಟ್ರೀಯ ಮಿಲಿಟರಿ ಶಾಲೆಗೆ ಬುಧವಾರ ಮಧ್ಯಾಹ್ನ ಹುಸಿ ಬಾಂಬ್‌ ಬೆದರಿಕೆ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ADVERTISEMENT

ಮಧ್ಯಾಹ್ನ ಶಾಲೆ ನಡೆಯುತ್ತಿದ್ದ ಸಂದರ್ಭದಲ್ಲಿ ಇ–ಮೇಲ್‌ನಲ್ಲಿ ಬೆದರಿಕೆ ಸಂದೇಶ ಬಂದಿತ್ತು. ಶಾಲಾ ಆವರಣದಲ್ಲಿ ಬಾಂಬ್‌ ಇಡಲಾಗಿದೆ. ಅದು ಸ್ಫೋಟಗೊಳ್ಳಲಿದೆ ಎಂದು ಇ–ಮೇಲ್ ಮೂಲಕ ಸಂದೇಶ ರವಾನಿಸಲಾಗಿತ್ತು. ಇ–ಮೇಲ್‌ ಪರಿಶೀಲಿಸಿದ ಶಾಲಾ ಸಿಬ್ಬಂದಿ ಮಕ್ಕಳನ್ನು ಹೊರಕ್ಕೆ ಕಳುಹಿಸಿದ್ದರು.

ನಂತರ, ಅಶೋಕನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಬಾಂಬ್‌ ಪತ್ತೆದಳ, ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದರು.

‘ಶಾಲಾ ಆವರಣದಲ್ಲಿ ಯಾವುದೇ ಸ್ಫೋಟಕ ವಸ್ತುಗಳಾಗಲಿ, ರಾಸಾಯನಿಕ ಪದಾರ್ಥಗಳಾಗಲಿ ಪತ್ತೆ ಆಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢವಾಯಿತು. ನಂತರ, ಯಥಾಪ್ರಕಾರ ತರಗತಿಗಳು ನಡೆದವು’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಇ–ಮೇಲ್‌ ಅನ್ನು ಸೈಬರ್ ತಜ್ಞರಿಗೆ ಕಳುಹಿಸಲಾಗಿದೆ. ಎಲ್ಲಿಂದ ಇ–ಮೇಲ್‌ ಬಂದಿದೆ ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.