ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ಜಿಲ್ಲಾವಾರು ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗೆ ಬೋನಸ್ ನೀಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಯೋಜನೆಯಡಿ 3ರಿಂದ 5 ವರ್ಷ ಸೇವೆ ಸಲ್ಲಿಸಿದವರಿಗೆ ಶೇ 10ರಷ್ಟು ಬೋನಸ್ ಹಾಗೂ ಐದು ವರ್ಷ ಪೂರೈಸಿದವರಿಗೆ ಶೇ 15ರಷ್ಟು ಬೋನಸ್ ಘೋಷಿಸಿದೆ. ಏಪ್ರಿಲ್ 1ರಿಂದ ಅನ್ವಯವಾಗಲಿದೆ.
‘ಬೋನಸ್ ಪಾವತಿಯಿಂದ ನೌಕರರ ಆತ್ಮಸ್ಥೈರ್ಯ ಹೆಚ್ಚಿದೆ. ಇದೇ ರೀತಿ 2018-19ನೇ ಸಾಲಿನ ಬೋನಸ್ ಅನ್ನು ನೌಕರರಿಗೆ ಪಾವತಿಸಬೇಕು. ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಜೀವವಿಮೆ ಹಾಗೂ ಆರೋಗ್ಯ ವಿಮೆ ಸೌಲಭ್ಯಗಳನ್ನು ಒದಗಿಸಬೇಕು ಎಂದುರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಒತ್ತಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.