ADVERTISEMENT

300ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಪುಸ್ತಕ ವಿತರಿಸಿದ ವೀರಪ್ಪನ್ ಪುತ್ರಿ ವಿಜಯಲಕ್ಷ್ಮಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2023, 5:51 IST
Last Updated 24 ಏಪ್ರಿಲ್ 2023, 5:51 IST
ಶಾಲಾ ಮಕ್ಕಳಿಗೆ ವಿಜಯಲಕ್ಷ್ಮಿ ಅವರು ಪುಸ್ತಕ ವಿತರಣೆ ಮಾಡಿದರು. ಭಾರತಿನಗರ ನಿವಾಸಿಗಳ ಸಂಘದ ಅಧ್ಯಕ್ಷ ಎನ್.ಎಸ್.ರವಿ ಇದ್ದರು

 – ಪ್ರಜಾವಾಣಿ ಚಿತ್ರ
ಶಾಲಾ ಮಕ್ಕಳಿಗೆ ವಿಜಯಲಕ್ಷ್ಮಿ ಅವರು ಪುಸ್ತಕ ವಿತರಣೆ ಮಾಡಿದರು. ಭಾರತಿನಗರ ನಿವಾಸಿಗಳ ಸಂಘದ ಅಧ್ಯಕ್ಷ ಎನ್.ಎಸ್.ರವಿ ಇದ್ದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ಚಲನಚಿತ್ರ ನಟಿಯೂ ಆಗಿರುವ ವೀರಪ್ಪನ್ ಪುತ್ರಿ ವಿಜಯಲಕ್ಷ್ಮಿ ಅವರು 300ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಪುಸ್ತಕ ವಿತರಿಸಿದರು.

ಬಡ ಮಕ್ಕಳಿಗೆ ಸಹಾಯ ಮಾಡಲು ಭಾರತಿನಗರ ನಿವಾಸಿಗಳ ವೇದಿಕೆ ವತಿಯಿಂದ ಕಾಕ್ಸ್‌ ಟೌನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು. ಅದಕ್ಕೂ ಮುನ್ನ ಪತಿ ಶಬರೀಶ್ ಅವರೊಂದಿಗೆ ತೆರಳಿ ವರನಟ ಡಾ.ರಾಜ್‌ಕುಮಾರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

‘ವಿಜಯಲಕ್ಷ್ಮಿ ಅವರು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಕಾರ್ಯಕ್ರಮಕ್ಕಾಗಿ ಬಂದಿದ್ದರು. ಯಾವುದೇ ರಾಜಕೀಯ ಉದ್ದೇಶ ಇಲ್ಲ’ ಎಂದು ಸಂಘದ ಅಧ್ಯಕ್ಷ ಎನ್.ರವಿ ಅವರು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.