ADVERTISEMENT

ಜಲಮಂಡಳಿಯ ಕೊಳವೆ ಮಾರ್ಗದ ಚೇಂಬರ್‌ಗೆ ಬಿದ್ದು ಬಾಲಕ ಸಾವು: ಸ್ವಯಂ ಪ್ರೇರಿತ ಪ್ರಕರಣ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 17:55 IST
Last Updated 3 ಫೆಬ್ರುವರಿ 2026, 17:55 IST
ಜಲಮಂಡಳಿ
ಜಲಮಂಡಳಿ   

ಬೆಂಗಳೂರು: ಜಲಮಂಡಳಿಯ ಕಾವೇರಿ ಐದನೇ ಹಂತದ ಕೊಳವೆ ಮಾರ್ಗದ ಚೇಂಬರ್‌ಗೆ ಬಿದ್ದು 9ನೇ ತರಗತಿಯ ವಿದ್ಯಾರ್ಥಿ ಪ್ರೀತಂ (14) ಮೃತಪಟ್ಟಿದ್ದ ಪ್ರಕರಣದಲ್ಲೂ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಾತಗುಣಿ ಎಂಬಲ್ಲಿ ನಡೆದ ಘಟನಾ ಸ್ಥಳಕ್ಕೆ ಆಯೋಗದ ಅಧ್ಯಕ್ಷ ಶಶಿಧರ್ ಎಸ್. ಕೋಸಂಬೆ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಗೆ ತಿಳಿಸಿದ್ದೇನೆ’ ಎಂದು ಶಶಿಧರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.