
ಪ್ರಜಾವಾಣಿ ವಾರ್ತೆ
ಜೈಲು
ಬೆಂಗಳೂರು: ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಅಪಘಾತವನ್ನುಂಟು ಮಾಡಿ ಬಾಲಕ ಬರೂನ್ (12) ಸಾವಿಗೆ ಕಾರಣವಾಗಿದ್ದ ಅಪರಾಧಿ ಸುರೇಶ್‌ನಿಗೆ (24) ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ 1ನೇ ಎಂಎಂಟಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
‘2017ರಲ್ಲಿ ಬಾಬುಸಾಪಾಳ್ಯ ಸರ್ವೀಸ್ ರಸ್ತೆಯಲ್ಲಿ ಆರೋಪಿ ಸುರೇಶ್ ಕಾರು ಚಲಾಯಿಸಿಕೊಂಡು ಹೊರಟಿದ್ದ. ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದ ಬಾಲಕರಾದ ಬರೂನ್ ಹಾಗೂ ಹೇಮಂತ್‌ಗೆ ಕಾರು ಡಿಕ್ಕಿ ಹೊಡೆದಿತ್ತು. ಬರೂನ್ ಮೃತಪಟ್ಟಿದ್ದ. ಹೇಮಂತ್ ಗಾಯಗೊಂಡಿದ್ದ’ ಎಂದು ಪೊಲೀಸರು ಹೇಳಿದರು.
‘ಚಾಲಕ ಸುರೇಶ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗೆ 3 ವರ್ಷ ಶಿಕ್ಷೆ ಜೊತೆಯಲ್ಲಿ ₹ 2 ಲಕ್ಷ ದಂಡ ವಿಧಿಸಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.