
ಬೊಮ್ಮನಹಳ್ಳಿ: ಹುಳಿಮಾವು ಸ್ಫೂರ್ತಿ ವಿನಾಯಕ ಸಹಿತ ಶ್ರೀ ಸತ್ಯನಾರಾಯಣ ಸ್ವಾಮಿ ದೇವಾಲಯದ 21ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಫೆ. 22ರಿಂದ ಮಾರ್ಚ್ 2ರವರೆಗೆ ನಡೆಯಲಿವೆ. ಫೆ.28ರಂದು ಬ್ರಹ್ಮರಥೋತ್ಸವ ಇದೆ.
ಅರ್ಚಕ ಹರ್ಷವರ್ಧನ್, ಪ್ರಧಾನ ಅರ್ಚಕ ವೈ.ಲಕ್ಷ್ಮೀಕಾಂತ ಭಟ್ಟಾಚಾರ್ಯ ಅವರ ಮುಂದಾಳತ್ವದಲ್ಲಿ ದೇವಾಲಯದಲ್ಲಿ ಪಾಂಚರಾತ್ರ ಆಗಮೋಕ್ತ ವಿಧಾನದಲ್ಲಿ ನವದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು, ಬ್ರಹ್ಮರಥೋತ್ಸವ, ವಾಹನೋತ್ಸವಗಳು ಹಾಗೂ ದಿವ್ಯ ಕಲ್ಯಾಣೋತ್ಸವ ಆಚರಣೆಗಳು ನಡೆಯಲಿವೆ.
ಜತೆಗೆ ಪಲ್ಲಕ್ಕಿ ಉತ್ಸವ, ವಾದ್ಯಮೇಳ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮೀಜಿ, ಸಂಸದ ತೇಜಸ್ವಿಸೂರ್ಯ, ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ’ ಎಂದು ಟ್ರಸ್ಟಿ ವೇಣುಗೋಪಾಲ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.