ADVERTISEMENT

ಬ್ರ್ಯಾಂಡ್ ಬೆಂಗಳೂರು: ಸಲಹೆಯ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2023, 19:18 IST
Last Updated 1 ಜುಲೈ 2023, 19:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಗರದ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಅಭಿಪ್ರಾಯ, ಸಲಹೆಗಳನ್ನು ನೀಡುವ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.

ಸಲಹೆ ನೀಡಲು ಜೂನ್‌ 30ರ ವರೆಗೆ ಅವಧಿ ನೀಡಲಾಗಿತ್ತು. ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಈ ಬಗ್ಗೆ ಸರ್ವ ಪಕ್ಷಗಳ ಶಾಸಕರ ಜತೆ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಜೊತೆ ಸಭೆ ನಡೆಸಿದ್ದರು. ಸಾರ್ವಜನಿಕರಿಗೆ ವೆಬ್ ಫೋರ್ಟಲ್ www.brandbengaluru.karnataka.gov.in ನೀಡಲಾಗಿತ್ತು. ನಿರೀಕ್ಷೆ ಮೀರಿ ಸಲಹೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲಾಗಿದೆ.

ಬೆಂಗಳೂರಿನ ಅಭಿವೃದ್ಧಿಗಾಗಿ ಏಳು ವಿಚಾರಗಳಾದ ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಕುರಿತು ಸಾರ್ವಜನಿಕರು #BrandBengaluru, #BetterBengaluru ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ವೆಬ್‌ ಪೋರ್ಟಲ್‌ ಅಲ್ಲದೇ ವಾಟ್ಸ್‌ಆ್ಯಪ್‌ (9480685700) ಮೂಲಕವೂ ಅಭಿಪ್ರಾಯ ಹಂಚಿಕೊಳ್ಳಬಹುದು. ಮಾಹಿತಿಗೆ ಟೋಲ್ ಫ್ರೀ ಸಂಖ್ಯೆ 1533ಗೆ ಕರೆ ಮಾಡಬಹುದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.