ADVERTISEMENT

ಬೆಂಗಳೂರು: ಬಾಲಿವುಡ್‌ ನಟಿ ಒಡೆತನದ ಪಬ್‌ನಲ್ಲಿ ಗಲಾಟೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2025, 1:08 IST
Last Updated 14 ಡಿಸೆಂಬರ್ 2025, 1:08 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಬಾಲಿವುಡ್‌ ನಟಿಯೊಬ್ಬರ ಒಡೆತನದಲ್ಲಿರುವ ನಗರದ ಲ್ಯಾಂಗ್‌ಫೋರ್ಡ್ ರಸ್ತೆಯ ಪಬ್‌ನಲ್ಲಿ ಎರಡು ದಿನಗಳ ಹಿಂದೆ ಗಲಾಟೆ ನಡೆದಿದೆ.

ಗಲಾಟೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವಿಡಿಯೊ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ADVERTISEMENT

ಪಬ್‌ನಲ್ಲಿ ಸರ್ವಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ಸಿಬ್ಬಂದಿ ಹಾಗೂ ಉದ್ಯಮಿಯ ನಡುವೆ ವಾಗ್ವಾದ ನಡೆದಿದೆ. ಗಲಾಟೆಯ ವೇಳೆ ಪಬ್​​​ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಲಾಗಿದೆ. ಗಲಾಟೆಯ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಕಬ್ಬನ್‌ಪಾರ್ಕ್ ಠಾಣೆ ಪೊಲೀಸರಿಗೆ ವಿಡಿಯೊ ಸಿಕ್ಕಿದ್ದು ಅದರ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.