ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಬ್ರೆಜಿಲ್‌ನ ರೂಪದರ್ಶಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪಿಯನ್ನು ಬಂಧಿಸಿ, ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗ ಒತ್ತಾಯಿಸಿದೆ.
ಈ ಬಗ್ಗೆ ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆದಿದ್ದು, ‘ಆರ್.ಟಿ. ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಾಸವಿದ್ದ ರೂಪದರ್ಶಿಯು ಆನ್‌ಲೈನ್ ಮೂಲಕ ದಿನಸಿ ಪದಾರ್ಥಗಳನ್ನು ಮನೆಗೆ ತರಿಸಲು ಬುಕ್ ಮಾಡಿದ್ದರು. ಅವರನ್ನು ಮನೆಗೆ ತಲುಪಿಸಲು ತೆರಳಿದ್ದ ಕುಮಾರ್ ರಾವ್ ಪವಾರ್ ರೂಪದರ್ಶಿಯ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ ನೀಡಿದ್ದ. ಇದರಿಂದ ಆತಂಕಕ್ಕೆ ಒಳಗಾಗಿದ್ದ ರೂಪದರ್ಶಿ ಆತನನ್ನು ಮನೆಯಿಂದ ಹೊರಕ್ಕೆ ತಳ್ಳಿದ್ದರು’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
‘ಕೆಲ ದಿನಗಳ ನಂತರ ಸಂತ್ರಸ್ತೆಯು ಈ ವಿಚಾರವನ್ನು ಸಹದ್ಯೋಗಿ ಕಾರ್ತಿಕ್ ಅವರೊಂದಿಗೆ ಹಂಚಿಕೊಂಡಿದ್ದರು. ಕಾರ್ತಿಕ್ ಅವರು ಈ ಬಗ್ಗೆ ಆರ್.ಟಿ. ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಪ್ರಕರಣವನ್ನು ಕಾನೂನು ಪ್ರಕಾರ ಪರಿಶೀಲಿಸಿ, ಕ್ರಮ ಕೈಗೊಂಡು ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು’ ಎಂದು ಪತ್ರದಲ್ಲಿ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.