ADVERTISEMENT

ಲಂಚ ಪಡೆಯುತ್ತಿದ್ದ ಬೆಸ್ಕಾಂನ ಇಇ ಬಂಧನ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2022, 20:14 IST
Last Updated 28 ಮಾರ್ಚ್ 2022, 20:14 IST
   

ಬೆಂಗಳೂರು: ಹೆಚ್ಚುವರಿ ವಿದ್ಯುತ್‌ ಮೀಟರ್‌ ಮತ್ತು ಎಲ್‌.ಟಿ. ವಿದ್ಯುತ್‌ ಪೂರೈಕೆ ಸಂಪರ್ಕ ಕೋರಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯಿಂದ ₹ 10,000 ಲಂಚ ಪಡೆಯುತ್ತಿದ್ದ ಬೆಸ್ಕಾಂನ ಬೆಂಗಳೂರು ಉತ್ತರ ವೃತ್ತದ ಕಾರ್ಯನಿರ್ವಾಹಕ ಎಂಜಿನಿಯರ್‌ ಎಲ್‌.ಎಸ್‌. ಲಕ್ಷ್ಮೀಶ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸೋಮವಾರ ಬಂಧಿಸಿದೆ.

ಬಸವೇಶ್ವರ ನಗರದ ನಿವಾಸಿಯೊಬ್ಬರು ತಮ್ಮ ಕಟ್ಟಡದಲ್ಲಿರುವ 18 ಮನೆಗಳ ಪೈಕಿ ಒಂದಕ್ಕೆ ಹೆಚ್ಚುವರಿ ವಿದ್ಯುತ್‌ ಮೀಟರ್‌ ಹಾಗೂ ಎಲ್‌.ಟಿ. ವಿದ್ಯುತ್‌ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಜೂರಾತಿ ನೀಡಲು ₹ 10,000 ಲಂಚ ನೀಡುವಂತೆ ಕಾರ್ಯನಿರ್ವಾಹಕ ಎಂಜಿನಿಯರ್‌ ಬೇಡಿಕೆ ಇಟ್ಟಿದ್ದರು. ಈ ಕುರಿತು ಅರ್ಜಿದಾರರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು.

ಶಿವಾನಂದ ವೃತ್ತದಲ್ಲಿರುವ ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಕಚೇರಿಯಲ್ಲಿ ಸೋಮವಾರ ಸಂಜೆ ಲಂಚ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು, ಲಕ್ಷ್ಮೀಶ್‌ ಅವರನ್ನು ಬಂಧಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.