ADVERTISEMENT

ಲಂಚ ಪ್ರಕರಣ: ಕಾರ್ಮಿಕ ಅಧಿಕಾರಿ ಶ್ಯಾಮರಾವ್ ಬಂಧನ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 21:58 IST
Last Updated 9 ಸೆಪ್ಟೆಂಬರ್ 2025, 21:58 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಕಾರ್ಮಿಕ ಚೀಟಿ ನೀಡಲು ₹10,000 ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಅಧಿಕಾರಿ ಶ್ಯಾಮರಾವ್ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಕೆ.ಆರ್‌.ಪುರ ನಿವಾಸಿ ವೆಂಕಟಾಚಲಪತಿ ಅವರು ಕಾರ್ಮಿಕ ಚೀಟಿಗಾಗಿ, ಕಾರ್ಮಿಕ ಇಲಾಖೆಯ ಬೆಂಗಳೂರು ನಗರ ವಿಭಾಗ–05ರ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕಚೇರಿಯ ಕಾರ್ಮಿಕ ಅಧಿಕಾರಿ ₹10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ವೆಂಕಟಾಚಲಪತಿ ದೂರು ನೀಡಿದ್ದರು. ಎಸ್‌ಪಿ ಶಿವಪ್ರಕಾಶ್‌ ದೇವರಾಜು ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ದೂರುದಾರರು ಕಾರ್ಮಿಕ ಇಲಾಖೆ ಕಚೇರಿಗೆ ತೆರಳಿ ಆರೋಪಿಯ ಖಾಸಗಿ ಕಾರು ಚಾಲಕ ದೇವರಾಜ್‌ಗೆ ಹಣ ನೀಡಿದರು. ಅದೇ ವೇಳೆ ದಾಳಿ ನಡೆಸಿ, ಬಂಧಿಸಲಾಯಿತು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಶ್ಯಾಮರಾವ್ ಅವರನ್ನು ಬಂಧಿಸಿದ್ದು, ದೇವರಾಜ್‌ ತಪ್ಪಿಸಿಕೊಂಡಿದ್ದಾರೆ. ಲಂಚದ ಹಣ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.