
ಸಾಂದರ್ಭಿಕ ಚಿತ್ರ
ಬೆಂಗಳೂರು: ಲಂಚ ಪಡೆಯುತ್ತಿದ್ದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಕೆ.ಆರ್. ಮಾರುಕಟ್ಟೆ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ವಸಂತಕುಮಾರ್ ಎಂಬವರನ್ನು ಅಮಾನತು ಮಾಡಲಾಗಿದೆ.
‘ಈ ಸಂಬಂಧ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ’ ಎಂದು ಸಂಚಾರ ಪಶ್ಚಿಮ ವಿಭಾಗದ ಅನಿತಾ ಅವರು ತಿಳಿಸಿದ್ದಾರೆ.
‘ಕೆ.ಆರ್.ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಂದ ವಸಂತಕುಮಾರ್ ಲಂಚ ಪಡೆಯುತ್ತಿದ್ದರು ಎಂಬ ಆರೋಪವಿತ್ತು. ವ್ಯಾಪಾರಿಗಳಿಂದ ದಾಖಲಾತಿ ಕೇಳುತ್ತಿದ್ದರು. ದಾಖಲೆಗಳನ್ನು ಕೊಡದಿದ್ದರೆ ಹಣಕ್ಕೆ ಬೇಡಿಕೆ ಇಡುತ್ತಿದ್ದರು ಎಂಬ ಆರೋಪ ಇದೆ. ಈ ಸಂಬಂಧ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿತ್ತು. ಅದನ್ನೂ ಪರಿಶೀಲಿಸಲಾಗಿದೆ. ನಗರ ಪೊಲೀಸ್ ಕಮಿಷನರ್ ಅವರು ಅಮಾನತು ಮಾಡಿ ಆದೇಶಿಸಿದ್ಧಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.