ADVERTISEMENT

‘ಶಿಕ್ಷಣ ಸಂಸ್ಥೆಗಳು ಭವಿಷ್ಯ ರೂಪಿಸುವ ಆಧಾರ ಕೇಂದ್ರಗಳಾಗಲಿ’

​ಪ್ರಜಾವಾಣಿ ವಾರ್ತೆ
Published 31 ಜನವರಿ 2023, 20:16 IST
Last Updated 31 ಜನವರಿ 2023, 20:16 IST

ಬೆಂಗಳೂರು: ‘ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಆಧಾರ ಕೇಂದ್ರಗಳಾಗಬೇಕು’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಕೆ.ಎಂ. ನಂಜಪ್ಪನವರ 111ನೇ ಜನ್ಮದಿನಾಚರಣೆ ಅಂಗವಾಗಿ ಶೇಷಾದ್ರಿಪುರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಮೇಳದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‘ಶಿಕ್ಷಣ ಸಂಸ್ಥೆಗಳು ಸರ್ಟಿಫಿಕೇಟ್‌ಗಳನ್ನು ಕೊಡುವುದಲ್ಲದೇ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಕೆಲಸವನ್ನು ಮಾಡಬೇಕು. ರಚನಾತ್ಮಕ ಕಾರ್ಯಕ್ರಮಗಳನ್ನು ನಡೆಸುವ ಜೊತೆಗೆ ತ್ಯಾಗ, ಸೇವಾ ಮನೋಭಾವ, ಜೀವ ಉಳಿಸುವ ಪವಿತ್ರ ಕೆಲಸಗಳನ್ನು ಮಾಡಬೇಕು’ ಎಂದು ಕರೆ ನೀಡಿದರು.

ಈ ರಕ್ತದಾನ ಶಿಬಿರದಲ್ಲಿ ಸಂಗ್ರಹವಾದ 1000ಕ್ಕೂ ಹೆಚ್ಚು ಯೂನಿಟ್‌ ರಕ್ತವನ್ನು ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಯಿತು.

ADVERTISEMENT

ವೂಡೇ. ಪಿ. ಕೃಷ್ಣ ಮಾತನಾಡಿದರು. ಶೇಷಾದ್ರಿಪುರ ಸಂಸ್ಥೆಯ ಅಧ್ಯಕ್ಷ ಎನ್.ಆರ್. ಪಂಡಿತಾರಾಧ್ಯ, ರೆಡ್‌ಕ್ರಾಸ್‌ ಸಂಸ್ಥೆಯ ರಾಜು ಚಂದ್ರಶೇಖರ್, ಸಹಾಯಕ ಕಾರ್ಯದರ್ಶಿ ಎಂ.ಎಸ್ ನಟರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.