ADVERTISEMENT

ವಾಹನಗಳಲ್ಲಿ ಪ್ರಖರ ಎಲ್‌ಇಡಿ ದೀಪ: 192 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 18 ಜುಲೈ 2024, 15:45 IST
Last Updated 18 ಜುಲೈ 2024, 15:45 IST

ಪ್ರಖರ ಲೈಟ್

ಪ್ರಖರ ಲೈಟ್

– ಪ್ರಜಾವಾಣಿ ಚಿತ್ರ

ADVERTISEMENT

ಬೆಂಗಳೂರು: ಪ್ರಖರ ಬೆಳಕು ಹೊರ ಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿಕೊಂಡಿದ್ದ 192 ವಾಹನ ಸವಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪೂರ್ವ ಸಂಚಾರ ವಿಭಾಗದ ವ್ಯಾಪ್ತಿಯಲ್ಲಿ ಮಂಗಳವಾರ ಮತ್ತು ಬುಧವಾರ ಕಾರ್ಯಾಚರಣೆ ನಡೆಸಿದ ಪೊಲೀಸರು, 427 ವಾಹನಗಳ ತಪಾಸಣೆ ನಡೆಸಿದರು. ನಿಯಮ ಉಲ್ಲಂಘಿಸಿದ 192 ಮಂದಿ ವಿರುದ್ಧ ಪ್ರಕರಣ ದಾಖಲಿಸಿ, ₹96 ಸಾವಿರ ದಂಡ ವಸೂಲು ಮಾಡಿದ್ದಾರೆ.

ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವುದು ಹಾಗೂ ನಿಯಮಗಳ ಮಹತ್ವದ ಬಗ್ಗೆ ಸವಾರರಿಗೆ ಅರಿವು ಮೂಡಿಸಲಾಯಿತು. ಮುಂದಿನ ದಿನಗಳಲ್ಲಿಯೂ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು ಎಂದು ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.