ADVERTISEMENT

ಬೆಂಗಳೂರು | ಮಕ್ಕಳಿಗೆ ಬೆಂಕಿ ಹಚ್ಚಿದ್ದು ನಾನೆ: ತಂದೆಯ ತಪ್ಪೊಪ್ಪಿಗೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2019, 6:10 IST
Last Updated 21 ಅಕ್ಟೋಬರ್ 2019, 6:10 IST
   

ಬೆಂಗಳೂರು:ಬಕ್ಷಿಗಾರ್ಡನ್‌ನಮನೆಯೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅಕ್ಕ-ತಮ್ಮ ಮೃತಪಟ್ಟಿದ್ದಾರೆ.

ಕಾವೇರಿ (21), ಶ್ರೀಕಾಂತ್ (13) ಮೃತರು. ಘಟನೆಯಲ್ಲಿ ಅವರ ತಂದೆ ಮುರಳಿ, ತಾಯಿ ಗೀತಾ ಅವರಿಗೆ ಗಂಭೀರ ಗಾಯಗಳಾಗಿವೆ.ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲು ಮಾಡಲಾಗಿದೆ. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ತಂದೆಯೇ ಪತ್ನಿ ಹಾಗೂ ಮಕ್ಕಳ ಮೇಲೆ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ’ಎಂದು ಪೊಲೀಸರು ಶಂಕಿಸಿದ್ದಾರೆ.

ADVERTISEMENT

ಮಕ್ಕಳಿಗೆ ಬೆಂಕಿ ಹಚ್ಚಿದ್ದು ನಾನೆ: ತಂದೆಯ ತಪ್ಪೊಪ್ಪಿಗೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿಸೀಮೆಎಣ್ಣೆ ಸುರಿದು ಪತ್ನಿ, ಮಕ್ಕಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ ನಾನೇ ಎಂದು ಮೃತ ಮಕ್ಕಳ ತಂದೆಮುರಳಿ ಪೊಲೀಸರ ಎದುರು ತಪ್ಪೊಪ್ಪಿಕೊಂಡಿದ್ದಾನೆ. ಮುರಳಿ ಅವರಿಗೂ ಸುಟ್ಟಗಾಯಗಳಾಗಿದ್ದು, ಪ್ರಸ್ತುತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನಾನೇ ಬೆಂಕಿ ಹಚ್ಚಿದೆ ಎಂದು ಮುರಳಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಕಾರ್ಪೆಂಟರ್‌ ಕೆಲಸ ಮಾಡುತ್ತಿದ್ದಮುರಳಿ ಈಚಿನ ದಿನಗಳಲ್ಲಿ ಕೆಲಸಕ್ಕೆ ಹೋಗುತ್ತಿರಲಿಲ್ಲ,

ಪತ್ನಿ ಗೀತಾ ಹೂವು ಕಟ್ಟಿ ಮಾರುತ್ತಾ ಕುಟುಂಬಕ್ಕೆ ಆಸರೆಯಾಗಿದ್ದರು.ಮಗಳು ಕಾವೇರಿ ಬಿ.ಕಾಂ,ಮಗ ಶ್ರೀಕಾಂತ್ 9ನೇ ತರಗತಿ ಓದುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.