ADVERTISEMENT

ಸಾಂಸ್ಕೃತಿಕ ಕೇಂದ್ರಗಳ ಕಾಮಗಾರಿ: ಬಿಎಸ್‌ವೈ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 21:19 IST
Last Updated 12 ಜೂನ್ 2020, 21:19 IST
ದಾವಣಗೆರೆ ಜಿಲ್ಲೆಯ ಹರಿಹರದ ರಾಜನಹಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ 2020 ರ ಜನಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆ ಜಿಲ್ಲೆಯ ಹರಿಹರದ ರಾಜನಹಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ 2020 ರ ಜನಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್   

ಬೆಂಗಳೂರು: ಸಿದ್ದಗಂಗಾ ಡಾ.ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಗ್ರಾಮ ಮತ್ತು ಆದಿಚುಂಚನಗಿರಿಯ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮಸ್ಥಳ ಬಾನಂದೂರು ಗ್ರಾಮಗಳಲ್ಲಿ ಸಾಂಸ್ಕೃತಿಕ ಮತ್ತುಪಾರಂಪರಿಕ ಕೇಂದ್ರಗಳ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ವಿಷಯ ತಿಳಿಸಿದರು.

ಕೋವಿಡ್-19 ರ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದ 16,095 ಕಲಾವಿದರು, ಸಾಹಿತಿಗಳಿಗೆ ತಲಾ ₹2,000 ದಂತೆ ಒಟ್ಟು ₹3.21 ಕೋಟಿ ಆರ್ಥಿಕ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.