ADVERTISEMENT

ಬಿಎಸ್‌ವೈ ಇಂದು ದೆಹಲಿಗೆ

ವರಿಷ್ಠರ ಜತೆ ಸಂಪುಟ ವಿಸ್ತರಣೆ ಕುರಿತು ಸಮಾಲೋಚನೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 20:33 IST
Last Updated 17 ನವೆಂಬರ್ 2020, 20:33 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ದೆಹಲಿಗೆ ತೆರಳಲಿದ್ದು, ಪಕ್ಷದ ವರಿಷ್ಠರ ಜತೆ ಸಮಾಲೋಚನೆ ನಡೆಸಿ ಬುಧವಾರವೇ ವಾಪಸಾಗಲಿದ್ದಾರೆ.

ವರಿಷ್ಠರಿಂದ ದಿಢೀರ್‌ ಆಹ್ವಾನ ಬಂದ ಕಾರಣ ಬುಧವಾರ ಬೆಳಿಗ್ಗೆ 10.30 ಕ್ಕೇ ಸಚಿವ ಸಂಪುಟ ಸಭೆಯನ್ನು ನಡೆಸಿ, 11.30 ಕ್ಕೆ ದೆಹಲಿಗೆ ಪ್ರಯಾಣ ಬೆಳೆಸುವರು. ಈ ಮೊದಲು ಬೆಳಿಗ್ಗೆ 11.30 ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು.

ದೀಪಾವಳಿ ಹಬ್ಬ ಮುಗಿದ ತಕ್ಷಣವೇ ವರಿಷ್ಠರ ಒಪ್ಪಿಗೆ ಪಡೆದು ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಮಾಡುವುದಾಗಿ ತಿಳಿಸಿದ್ದರು. ಇತ್ತೀಚೆಗೆ ನಡೆದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಸಾಧಿಸಿರುವುದರಿಂದ ಯಡಿಯೂರಪ್ಪ ಅವರಿಗೆ ಬಲ ಬಂದಂತಾಗಿದೆ ಎಂದು ರಾಜಕೀಯ ವಲಯದಲ್ಲಿ
ವಿಶ್ಲೇಷಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.