ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ಪ್ರವಾಹದ ನೀರು ನುಗ್ಗಿ ವಿದ್ಯಾರ್ಥಿಗಳ ನೋಟ್ ಪುಸ್ತಕಗಳು ಮತ್ತು ಪಠ್ಯಪುಸ್ತಕಗಳು ಕೊಚ್ಚಿ ಹೋದ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಓದಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಮತ್ತು ಆರ್ಥಿಕ ಸಹಾಯ ನೀಡಿದರು.
ತಮ್ಮ ಗೃಹಕಚೇರಿ ‘ಕೃಷ್ಣಾ’ಗೆ ನಾಲ್ವರು ವಿದ್ಯಾರ್ಥಿಗಳನ್ನು ಕರೆಸಿಕೊಂಡ ಯಡಿಯೂರಪ್ಪ ಪುಸ್ತಕಗಳನ್ನು ವಿತರಿಸಿದರು. ನಷ್ಟಕ್ಕೆ ಒಳಗಾದ ಇತರ ಕುಟುಂಬಗಳಿಗೂ ಪರಿಹಾರದ ಚೆಕ್ ವಿತರಿಸಲಾಗಿದೆ ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.