ADVERTISEMENT

ಬೆಂಗಳೂರು | ಅನಿಲ ಸೋರಿಕೆಯಿಂದ ಸ್ಫೋಟ: ಯುವತಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 31 ಜುಲೈ 2025, 16:23 IST
Last Updated 31 ಜುಲೈ 2025, 16:23 IST
   

ಬೆಂಗಳೂರು: ಬಿಟಿಎಂ ಲೇಔಟ್‌ನ ಎರಡನೇ ಹಂತದ ಮನೆಯೊಂದರಲ್ಲಿ ಗುರುವಾರ ಸಂಜೆ ಎಲ್‌ಪಿಜಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸಂಭವಿಸಿದ ಸ್ಫೋಟದಿಂದ ಯುವತಿ ಗಾಯಗೊಂಡಿದ್ದಾರೆ.

ಸಂಜೆ 6.45ರ ಸುಮಾರಿಗೆ ಅಗ್ನಿಶಾಮಕ ದಳದ ಸಹಾಯವಾಣಿಗೆ ಕರೆ ಬಂದಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದರು.

‘ಅನಿಲ ಸೋರಿಕೆಯಿಂದ ಘಟನೆ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಗಾಯಾಳು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

ಮೈಕೊಲೇಔಟ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.