ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಕಾನೂನು ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಬಿ.ಎ., ಎಲ್.ಎಲ್.ಬಿ. (ಆನರ್ಸ್) ಪದವಿಯ ಮೊದಲ ಸೆಮಿಸ್ಟರ್ ಕೋರ್ಸ್‍ನ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ಶೇ 45, ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಶೇ 40ರಷ್ಟು ಹಾಗೂ ಒಬಿಸಿಗೆ ಶೇ 42ರಷ್ಟು (ರಾಜ್ಯದ ಅಭ್ಯರ್ಥಿಗಳಿಗೆ ಮಾತ್ರ) ಅಂಕಗಳನ್ನು ಗಳಿಸಿರುವವರು ಮಾತ್ರ ಅರ್ಹರಾಗಿರುತ್ತಾರೆ.
ಸಾಮಾನ್ಯ ವರ್ಗಕ್ಕೆ 20 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಹಾಗೂ ಇತರೆ ಹಿಂದುಳಿದ ವರ್ಗ ಮತ್ತು ವಿದೇಶಿ ವಿದ್ಯಾರ್ಥಿಗಳಿಗೆ ಗರಿಷ್ಠ 22 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.
ಅರ್ಜಿ ಶುಲ್ಕ– ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ₹850, ಪರಿಶಿಷ್ಟ ಜಾತಿ, ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ₹550.
ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಆ.12. ಅರ್ಜಿ ನಮೂನೆ ಮತ್ತು ವಿವರಗಳಿಗೆ ವಿಶ್ವವಿದ್ಯಾಲಯದ ಅಧಿಕೃತ ವೆಬ್‍ಸೈಟ್
www.bangaloreuniversity.ac.in ಅಥವಾ www.ulcbangalore.com ಸಂಪರ್ಕಿಸಬಹುದು. ಮಾಹಿತಿಗೆ: 080-22961172.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.