ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತು ಸಾರಿಗೆ ನೌಕರರ ಮುಷ್ಕರದ ಕಾರಣ, ಬೆಂಗಳೂರು ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದೆ.
‘ಏ.19ರಂದು ನಿಗದಿಯಾಗಿದ್ದ ಪದವಿ, ಸ್ನಾತಕೋತ್ತರ ಪದವಿ ಮತ್ತು ಎಂಜಿನಿಯರಿಂಗ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಪರೀಕ್ಷೆಗಳ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.