ADVERTISEMENT

ಅಂತರರಾಷ್ಟ್ರೀಯ ಮಾಧ್ಯಮ ಶಿಕ್ಷಣ ಸಮ್ಮೇಳನ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2020, 18:09 IST
Last Updated 26 ಡಿಸೆಂಬರ್ 2020, 18:09 IST

ಬೆಂಗಳೂರು: ಭಾರತೀಯ ಮಾಧ್ಯಮ ಶಿಕ್ಷಣದ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗವು ಇದೇ 28 ಮತ್ತು 29ರಂದು ಮಾಧ್ಯಮ ಶಿಕ್ಷಣ ಕುರಿತು ಆನ್‍ಲೈನ್‍ನಲ್ಲಿ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.

ವಿಶ್ವದಾದ್ಯಂತ ಸಾವಿರಕ್ಕೂ ಹೆಚ್ಚು ಮಂದಿ ಮಾಧ್ಯಮ ಶಿಕ್ಷಣ ತಜ್ಞರು, ವೃತ್ತಿಪರರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳಲಿರುವ ಈ ಸಮ್ಮೇಳನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಿಗ್ಗೆ 11ಕ್ಕೆ ಉದ್ಘಾಟಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ, ಮಾಧ್ಯಮ ಶಿಕ್ಷಣ ತಜ್ಞ ಪ್ರೊ.ಎಚ್.ಎಸ್ ಈಶ್ವರ, ಮಾಧ್ಯಮ ಮತ್ತು ಸಂವಹನ ಸಂಶೋಧನಾ ಅಂತರರಾಷ್ಟ್ರೀಯ ಸಂಸ್ಥೆಯ ಉಪಾಧ್ಯಕ್ಷರಾದ ಡಾ.ಉಷಾ ರಾಮನ್ ಭಾಗವಹಿಸಲಿದ್ದಾರೆ. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೇಣುಗೋಪಾಲ್ ಅಧ್ಯಕ್ಷತೆ ವಹಿಸಲಿದ್ದಾರೆ.

‘ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ 12 ಗೋಷ್ಠಿಗಳು ನಡೆಯಲಿದ್ದು, ನೂರಕ್ಕೂ ಹೆಚ್ಚು ಪರಿಣಿತರು ಮಾಧ್ಯಮದ ಬಗ್ಗೆ ತಮ್ಮ ಸಂಶೋಧನಾ ವಿಚಾರಗಳನ್ನು ಮಂಡಿಸಲಿದ್ದಾರೆ. ಇದೇ 29ರಂದು ಸಂಜೆ 6ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ನ್ಯಾಕ್ ನಿರ್ದೇಶಕ ಪ್ರೊ.ಎಸ್.ಸಿ.ಶರ್ಮ ಸಮಾರೋಪ ಭಾಷಣ ಮಾಡಲಿದ್ದಾರೆ’ ಎಂದು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಮುಖ್ಯಸ್ಥ ಡಾ.ಬಿ.ಕೆ. ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.