ಬೆಂಗಳೂರು: ಕಾರ್ಮಿಕರನ್ನು ಊಟಕ್ಕೆ ಕರೆದೊಯ್ಯುತ್ತಿದ್ದ ಬಸ್ ಬೇಗೂರು ಜಂಕ್ಷನ್ ಬಳಿ ಪಲ್ಟಿಯಾಗಿ 9 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಒಬ್ಬರ ಸ್ಥಿತಿ ಗಂಭೀರವಾಗಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಮಂಗಳವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಊಟಕ್ಕೆ ಕರೆದೊಯ್ಯಲಾಗುತ್ತಿತ್ತು. ಆಗ ರಸ್ತೆ ವಿಭಜಕಕ್ಕೆ ಬಸ್ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕ್ರೇನ್ ತರಿಸಿ ಬಸ್ ಅನ್ನು ಮೇಲಕ್ಕೆ ಎತ್ತಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.
ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.