ADVERTISEMENT

ಖಾಸಗಿ ಬಸ್‌ ಗುದ್ದಿ ತರಕಾರಿ ವ್ಯಾಪಾರಿ ಸಾವು

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2023, 16:03 IST
Last Updated 29 ಆಗಸ್ಟ್ 2023, 16:03 IST
ಸಾವು–‍ಪ್ರಾತಿನಿಧಿಕ ಚಿತ್ರ
ಸಾವು–‍ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಖಾಸಗಿ ಬಸ್ ಗುದ್ದಿ ತರಕಾರಿ ವ್ಯಾಪಾರಿ ಮಂಜುನಾಥ್ (28) ಮೃತಪಟ್ಟಿದ್ದು, ಈ ಸಂಬಂಧ ಸಿಟಿ ಮಾರ್ಕೆಟ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಪಂತರಪಾಳ್ಯದ ನಿವಾಸಿ ಮಂಜುನಾಥ್, ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ’ ಎಂದು ಸಿಟಿ ಮಾರ್ಕೆಟ್ ಸಂಚಾರ ಠಾಣೆ ಪೊಲೀಸರು ಹೇಳಿದರು.

‘ಚಾಲಕ ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ. ರಸ್ತೆ ದಾಟುತ್ತಿದ್ದ ಮಂಜುನಾಥ್ ಅವರಿಗೆ ಬಸ್ ಗುದ್ದಿತ್ತು. ತೀವ್ರ ಗಾಯಗೊಂಡಿದ್ದರಿಂದ ಮಂಜುನಾಥ್ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಕಾರಣವಾಗಿರುವ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.