ಕಿರಣ್ ಜೈನ್
ಬೆಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪದ ಅಡಿ ಉದ್ಯಮಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿಯ ಕಿರಣ್ ಜೈನ್ ಬಂಧಿತ ಆರೋಪಿ.
ನಗರದ ವಿವಿಧೆಡೆ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಸಿಸಿಬಿ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿದ್ದರು. ದಾಳಿ ವೇಳೆ ಎಂಟು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಅಲ್ಲೇ ಎಂಟು ಮಧ್ಯವರ್ತಿಗಳನ್ನು ಬಂಧಿಸಿದ್ದರು. ರಕ್ಷಣೆಯಾದ ಯುವತಿಯರ ಪೈಕಿ ಒಬ್ಬ ಬಾಲಕಿಯಿದ್ದಳು. ಈ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಾಗ ಆರೋಪಿ ಕಿರಣ್ ಜೈನ್ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಗೊತ್ತಾಗಿತ್ತು. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿನಿಮಾ, ಧಾರಾವಾಹಿ, ಪಬ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹೆಣ್ಣು ಮಕ್ಕಳನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ದೂಡಲಾಗುತ್ತಿತ್ತು ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.