ADVERTISEMENT

ಫೆಮಾ ಕಾಯ್ದೆ ಉಲ್ಲಂಘನೆ ಆರೋಪ: ಉದ್ಯಮಿ ಮೊಹಮ್ಮದ್ ನಿವಾಸದಲ್ಲಿ ಶೋಧ

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 16:50 IST
Last Updated 23 ಜೂನ್ 2025, 16:50 IST
ಜಾರಿ ನಿರ್ದೇಶನಾಲಯ 
ಜಾರಿ ನಿರ್ದೇಶನಾಲಯ    

ಬೆಂಗಳೂರು: 'ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ’ (ಫಾರಿನ್ ಎಕ್ಸ್‌ಚೇಂಜ್ ಮ್ಯಾನೇಜ್‌ಮೆಂಟ್ ಆಕ್ಟ್‌–ಫೇಮಾ) ಉಲ್ಲಂಘನೆ ಆರೋಪದ ಅಡಿ ಉದ್ಯಮಿ ಮೊಹಮ್ಮದ್ ಇಕ್ಬಾಲ್ ಮತ್ತು ಇತರರಿಗೆ ಸೇರಿದ ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಜಾರಿ ನಿರ್ದೇಶನಾಲಯ ಬೆಂಗಳೂರು ವಲಯವು ಗುರುವಾರ ಶೋಧ ನಡೆಸಿದೆ.

ಫೇಮಾ ಉಲ್ಲಂಘನೆಗೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳು, ಇತರೆ ಡಿಜಿಟಲ್ ಸಾಕ್ಷ್ಯಗಳು ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ಪ್ರಕಟಣೆ ತಿಳಿಸಿದೆ.

ಕಂಪನಿಗಳಿಗೆ ಕಾರ್ಮಿಕರನ್ನು ಒದಗಿಸುವ ಉದ್ಯಮ ನಡೆಸುತ್ತಿರುವ ಅನಿವಾಸಿ ಭಾರತೀಯ, ಉದ್ಯಮಿ ಮೊಹಮ್ಮದ್ ಇಕ್ಬಾಲ್ ದೋಹಾದಲ್ಲಿರುವ ತನ್ನ ಮಾಲೀಕತ್ವದ 5 ಘಟಕಗಳಿಂದ ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿ ನಿರ್ವಹಿಸುತ್ತಿದ್ದ ತನ್ನ ಎನ್. ಆರ್. ಇ/ಎನ್. ಆರ್. ಓ ಖಾತೆಗಳಿಗೆ ₹ 70 ಕೋಟಿ ವರ್ಗಾಯಿಸಿರುವುದು ತನಿಖೆ ವೇಳೆ ಪತ್ತೆಯಾಗಿದೆ.

ADVERTISEMENT

ಶೋಧ ಕಾರ್ಯಾಚರಣೆಯ ವೇಳೆ ವಶಪಡಿಸಿಕೊಂಡ ಮಹತ್ವದ ದಾಖಲೆಗಳು ಹಾಗೂ ಡಿಜಿಟಲ್ ಸಾಕ್ಷ್ಯಗಳಿಂದ ಮೊಹಮ್ಮದ್ ಇಕ್ಬಾಲ್ ಅವರು ಫೇಮಾ ಕಾಯ್ದೆ ಉಲ್ಲಂಘಿಸಿರುವುದು ಕಂಡು ಬಂದಿದೆ. ತನಿಖೆ ಮುಂದುವರಿದಿದೆ ಎಂದು ಇ.ಡಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.