ಬೆಂಗಳೂರು: ಜಲಮಂಡಳಿಯು ಇದೇ 30ರಂದು (ಶನಿವಾರ) ಬೆಳಿಗ್ಗೆ 9ರಿಂದ 10.30ರವರೆಗೆ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಜಲಮಂಡಳಿ ಅಧ್ಯಕ್ಷ ಎನ್. ಜಯರಾಂ ಅಹವಾಲು ಆಲಿಸಲಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಮತ್ತು ಕೊಳವೆಗಳಿಂದ ತ್ಯಾಜ್ಯ ನೀರು ಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ಹೇಳಬಹುದು.
ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆ ತಿಳಿಸಿ ದೂರು ನೀಡಬಹುದು. ದೂರವಾಣಿ ಸಂಖ್ಯೆ: 080-22945119.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.