ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಳಸುವ ಕಾರು 10 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ನಗರದ ಜಂಕ್ಷನ್‌ಗಳಲ್ಲಿ ಅಳವಡಿಸಿರುವ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂನಲ್ಲಿ (ಐಟಿಎಂಎಸ್) ಸೆರೆಯಾಗಿದೆ.
ವಿಜಯೇಂದ್ರ ಅವರು ಬಳಸುವ ಕೆಎ03ಎಂವೈ4545 ಸಂಖ್ಯೆ ಕಾರಿನ ಮೇಲೆ ಸಂಚಾರ ನಿಮಯ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿದ್ದವು.
ಸೀಟ್ ಬೆಲ್ಟ್ ಧರಿಸದೆ ಪ್ರಯಾಣ, ಅತಿವೇಗದ ಚಾಲನೆ, ಜಂಕ್ಷನ್‌ಗಳಲ್ಲಿ ಸಿಗ್ನಲ್ ಇದ್ದರೂ ಮುಂದಕ್ಕೆ ಸಾಗಿರುವುದು, ಜೀಬ್ರಾ ಕ್ರಾಸಿಂಗ್ ಮೂಲಕ ಸಂಚಾರ ನಿಯಮ ಉಲ್ಲಂಘಿಸಲಾಗಿದೆ. ಶೇ 50 ರಿಯಾಯಿತಿ ಆಧರಿಸಿ ₹3,250 ದಂಡವಿತ್ತು. 2020ರಿಂದಲೂ ಬಾಕಿಯಿದ್ದ ದಂಡವನ್ನು ಪಾವತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.