
ಯಲಹಂಕ: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಅರ್ಕಾವತಿ ಬಡಾವಣೆಯ ಮೈದಾನದಲ್ಲಿ ಜನವರಿ 17 ಮತ್ತು 18ರಂದು ಸಂಕ್ರಾಂತಿ ‘ಸುಗ್ಗಿ-ಹುಗ್ಗಿ ಸಾಂಸ್ಕೃತಿಕ ಸಂಭ್ರಮ ಆಚರಣೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಆಯೋಜಕಿ ಮೀನಾಕ್ಷಿ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ಸ್ವಯಸೇವಕರ ಸಂಘದ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಶನಿವಾರ ‘ಬರ್ಫಿ ಬ್ಯಾಂಡ್ ತಂಡದಿಂದ ಸಂಗೀತ ಕಾರ್ಯಕ್ರಮ, ಆಹಾರ ಮಳಿಗೆಗಳು ಮತ್ತು ವಾಸವಿ ಅವರೆಬೇಳೆ ಮೇಳ ಸೇರಿದಂತೆ ರಂಗೋಲಿ ಸ್ಪರ್ಧೆ, ಕಬಡ್ಡಿ ಪಂದ್ಯಗಳು, ಮಡಿಕೆ ಒಡೆಯುವ, ಚಿತ್ರಕಲೆ, ಜಾನಪದ ನೃತ್ಯ ಹಾಗೂ ಹಗ್ಗ-ಜಗ್ಗಾಟ ಸ್ಪರ್ಧೆಗಳ ಜೊತೆಗೆ ಎತ್ತಿನಗಾಡಿ ಸವಾರಿಯೂ ಇರಲಿದೆ.
ಭಾನುವಾರ ಸಂಜೆ 6 ಗಂಟೆಗೆ ಪ್ರಭಾತ್ ಆರ್ಟ್ಸ್ ಇಂಟರ್ ನ್ಯಾಷನಲ್ ತಂಡದವರಿಂದ ಮಹಾಭಾರತದ ಕುರುಕ್ಷೇತ್ರ ಯುದ್ಧ ಆಧಾರಿತ ‘18 ದಿನಗಳು ಎಂಬ ನೃತ್ಯ ನಾಟಕ ಏರ್ಪಡಿಸಲಾಗಿದೆ. ಇದರಲ್ಲಿ ಕುರುಕ್ಷೇತ್ರದ ಮುಖ್ಯ ಘಟನೆಗಳನ್ನು 70ಕ್ಕೂ ಹೆಚ್ಚು ಕಲಾವಿದರು ವೇದಿಕೆಯ ಮೇಲೆ ತರಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.