ADVERTISEMENT

ಗುಣಮಟ್ಟದ ಶಿಕ್ಷಣ ಒದಗಿಸಲು ಬದ್ಧ: ಬೈರತಿ ಬಸವರಾಜ

​ಪ್ರಜಾವಾಣಿ ವಾರ್ತೆ
Published 2 ಜುಲೈ 2021, 20:47 IST
Last Updated 2 ಜುಲೈ 2021, 20:47 IST
ಶಾಲಾ ಸಭಾಂಗಣವನ್ನು ಸಚಿವ ಬೈರತಿ ಬಸವರಾಜ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯ, ಶಾಲೆಯ ಅಡಳಿತ ‌‌ಮಂಡಳಿ ಅಧ್ಯಕ್ಷ ಆರ್.ಮಂಜುನಾಥ್, ಭಾರತಿ, ನಿರ್ಮಲಾ, ತುಳಸಿ ಬಾಯಿ, ಪ್ರಕಾಶ ಕುಮಾರ್, ಶಾಂತಾ ಕೃಷ್ಣಮೂರ್ತಿ, ಮುನೇಗೌಡ ಹಾಗೂ ಇತರರು ಇದ್ದರು.

ಕೆ.ಆರ್.ಪುರ: ‘ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಸವಲತ್ತು ಗಳನ್ನು ಒದಗಿಸಲಾಗುವುದು’ ಎಂದು ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ ತಿಳಿಸಿದರು.

ರಾಮಮೂರ್ತಿನಗರ ವಾರ್ಡ್‌ನ ಅಂಬೇಡ್ಕರ್ ನಗರ ಸರ್ಕಾರಿ ಹಿರಿಯ ಪ್ರಾಥಮಿಕ, ಫ್ರೌಡಶಾಲೆ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜಿ ನಲ್ಲಿ ₹ 2 ಕೋಟಿ ವೆಚ್ಚದಲ್ಲಿ ನೂತನ ಕೊಠಡಿ, ತಡೆಗೋಡೆ, ಶೌಚಾಲಯ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆಯ ಮಕ್ಕಳು ಯಾವುದೇ ರೀತಿಯಲ್ಲಿ ಹಿಂದುಳಿಯ ಬಾರದು, ಅವರ ಕಲಿಕೆಗೆ ಅವಶ್ಯಕವಾಗಿರುವ ಸೌಲಭ್ಯಗಳನ್ನು ಕಲ್ಪಿಸಲು ಬದ್ದ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.