ಯುವ ದಸರಾ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದರು
ಯಲಹಂಕ: ‘ನಾಡಿನ ಪರಂಪರೆ, ಕಲೆ, ಸಂಪ್ರದಾಯ, ಸಂಸ್ಕೃತಿ ರಕ್ಷಣೆ ಭಾಗವಾಗಿ ಬ್ಯಾಟರಾಯನಪುರದಲ್ಲಿ ದಸರಾ ಮಹೋತ್ಸವ ಹಾಗೂ ಯುವ ದಸರಾ ಕಾರ್ಯಕ್ರಮ ಆಯೋಜಿಸಿರುವುದು ಸ್ತುತ್ಯರ್ಹ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬ್ಯಾಟರಾಯನಪುರ ಕ್ಷೇತ್ರದ ವಿದ್ಯಾರಣ್ಯಪುರದ ಎನ್.ಟಿ.ಐ.ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ ನೇತೃತ್ವದಲ್ಲಿ ಆಯೋಜಿಸಿದ್ದ ಯುವ ದಸರಾ ಉತ್ಸವ ಉದ್ಘಾಟಿಸಿ ಮಾತನಾಡಿ, ‘ಕೇಸರಿ ಫೌಂಡೇಷನ್ ಮೂಲಕ ನಾಲ್ಕು ವರ್ಷಗಳಿಂದ ದಸರಾ ಉತ್ಸವ ಮಾಡುತ್ತಿದ್ದಾರೆ. ಈ ಬಾರಿ ಯುವ ದಸರಾ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿರುವುದು ಸಂತೋಷದ ಸಂಗತಿ’ ಎಂದರು.
ಶಾಸಕ ಎಸ್. ಆರ್ ವಿಶ್ವನಾಥ್ ಮಾತನಾಡಿದರು .ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ವಿವಿಧ ಬಡಾವಣೆಗಳ 101 ದೇವರುಗಳ ಉತ್ಸವಕ್ಕೆ ಕೇಂದ್ರಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.
ವಿದ್ಯಾರಣ್ಯಪುರದಿಂದ ಹೊರಟ ದೇವರುಗಳ ಉತ್ಸವ ತಿಂಡ್ಲು, ಕೊಡಿಗೇಹಳ್ಳಿ ಮತ್ತು ಸಹಕಾರನಗರ ಮಾರ್ಗವಾಗಿ ಬ್ಯಾಟರಾಯನಪುರ ತಲುಪಿತು.
ಮುಖಂಡ ಎಚ್.ಸಿ.ತಮ್ಮೇಶ್ ಗೌಡ, ಚಿತ್ರನಟಿ ಅಮೂಲ್ಯ ಜಗದೀಶ್, ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಹನುಮಂತಗೌಡ, ನಗರ ಮಂಡಲ ಅಧ್ಯಕ್ಷ ಕೃಷ್ಣಮೂರ್ತಿ, ಪಿ.ಕೆ.ರಾಜಗೋಪಾಲ್, ಶರಣು ತಳ್ಳಿಕೇರಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.