ADVERTISEMENT

ಪ್ರತಿಯೊಬ್ಬರಿಗೂ ಕೇಂದ್ರದ ಯೋಜನೆ ತಲುಪಿಸಲು ಬಿ.ವೈ.ವಿಜಯೇಂದ್ರ ಕರೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2023, 16:10 IST
Last Updated 26 ಡಿಸೆಂಬರ್ 2023, 16:10 IST
ಕಾರ್ಯಕ್ರಮದಲ್ಲಿ ಕಾರ್ಯಕರ್ತರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು
ಕಾರ್ಯಕ್ರಮದಲ್ಲಿ ಕಾರ್ಯಕರ್ತರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು   

ಕೆ.ಆರ್.ಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿದ್ದ ಜನಪರ ಯೋಜನೆಗಳು ಪ್ರತಿಯೊಬ್ಬ ವ್ಯಕ್ತಿಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದರು.

ಕೆ.ಆರ್.ಪುರ ಕ್ಷೇತ್ರದ ಬಿಬಿಎಂಪಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದರು.

ADVERTISEMENT

ಶಾಸಕ ಬೈರತಿ ಬಸವರಾಜ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡು ಅವಧಿ ಪೂರೈಸಲಿದೆ. ರಾಜ್ಯ ಅಧ್ಯಕ್ಷರು ನಮಗೆ ರಾಜ್ಯ ಉಪಾಧ್ಯಕ್ಷ ಹುದ್ದೆ ಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ. ಮುಂದಿನ ದಿನಗಳಲ್ಲಿ ಜಿಲ್ಲಾ ಪ್ರವಾಸ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಮುಖಂಡರಾದ ಸಚ್ಚಿದಾನಂದಮೂರ್ತಿ, ರಾಜ್ಯ ಮಾಜಿ ಮಹಿಳಾ ಅಧ್ಯಕ್ಷೆ ಗೀತಾ ವಿವೇಕಾನಂದ, ಪಿ.ಜೆ‌.ಅಂಥೋಣಿಸ್ವಾಮಿ, ಕಲ್ಕೆರೆ ಕೃಷ್ಣಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.