ADVERTISEMENT

ಕುಗ್ರಾಮದ ಸಿ. ಕರಿಯಪ್ಪಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2022, 22:12 IST
Last Updated 31 ಅಕ್ಟೋಬರ್ 2022, 22:12 IST
ಸಿ.ಕರಿಯಪ್ಪ
ಸಿ.ಕರಿಯಪ್ಪ   

ದಾಬಸ್‌ಪೇಟೆ: ದಶಕಗಳಿಂದ ನೇತ್ರ ತಪಾಸಣೆ ಮತ್ತು ಉಚಿತ ಚಿಕಿತ್ಸಾ ಶಿಬಿರ ಏರ್ಪಡಿಸಿ ಸಾವಿರಾರು ಮಂದಿಗೆ ಬೆಳಕಾಗುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿರುವ ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿ ವ್ಯಾಪ್ತಿಯ ಕುಗ್ರಾಮ ಬುಗಡಿಹಳ್ಳಿ ಗೊಲ್ಲರಹಟ್ಟಿಯ ಸಿ.ಕರಿಯಪ್ಪ ಅವರಿಗೆ ಸಮಾಜ ಸೇವೆ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಕರಿಯಪ್ಪ ಅವರು ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರಗಳು ಹಾಗೂ ನೇತ್ರ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ ಅಗತ್ಯ ಇರುವವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸಿ, ಕನ್ನಡಕಗಳನ್ನು ಕೊಡಿಸುವ ಮೂಲಕ ನಿರಂತರ ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದಾರೆ.

‘ನಾನು ಪ್ರಶಸ್ತಿಗೆ ಅಪೇಕ್ಷೆ ಪಟ್ಟವನಲ್ಲ. ನನ್ನ ಸೇವೆಯನ್ನು ಗುರುತಿಸಿ ಸರ್ಕಾರ ಪ್ರಶಸ್ತಿಯನ್ನು ನೀಡಿರುವುದು ನಾನು ಇನ್ನಷ್ಟು ಸೇವೆ ಮಾಡಲು ಪ್ರೇರಣೆ ನೀಡಿದೆ. ನಮ್ಮ ಸೋಂಪುರ ಭಾಗಕ್ಕೆ ಇದುವರೆಗೆ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿರಲಿಲ್ಲ. ಅದು ನನ್ನ ಮೂಲಕ ಸಿಕ್ಕಿರುವುದು ಇನ್ನಷ್ಟು ಖುಷಿ ತಂದಿದೆ’ ಎಂದು ಸಿ.ಕರಿಯಪ್ಪ ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.