ADVERTISEMENT

ಮುಸ್ಲಿಂ ಮಹಿಳೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 22:47 IST
Last Updated 23 ಜನವರಿ 2020, 22:47 IST

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೊಂದಣಿ (ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ವಿರೋಧಿಸಿ ಫ್ರೇಜರ್ ಟೌನ್‌ನ ಮಾರ್ಕ್ಸ್‌ ರಸ್ತೆಯಲ್ಲಿ ಗುರುವಾರ ರಾತ್ರಿ ಮುಸ್ಲಿಂ ಸಮುದಾಯದ 200ಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆ ನಡೆಸಿದರು.

ರಾತ್ರಿಯಾಗುತ್ತಿದ್ದಂತೆ ಗುಂಪುಸೇರಿದ ನೂರಾರು ಮಹಿಳೆಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪುಲಿಕೇಶಿನಗರ ಠಾಣೆಯ ಪೊಲೀಸರು ಭದ್ರತೆ ಒದಗಿಸಿದರು. ಹಿರಿಯ ಪೊಲೀಸ್‌ ಅಧಿಕಾರಿಗಳೂ ಸ್ಥಳದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT