ಹೈಕೋರ್ಟ್
ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕೆ. ಗೋವಿಂದರಾಜ್, ಮುಖ್ಯಮಂತ್ರಿ ಮುಖ್ಯ ಸಲಹೆಗಾರ ಸುನೀಲ್ ಕನಗೋಲು ಹಾಗೂ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ನೇಮಕಾತಿ ಹಾಗೂ ಇವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕ್ರಮವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
‘ಸಚಿವರನ್ನು ಹೊರತುಪಡಿಸಿ ಇತರರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಬಾರದು ಎಂದು ಎಲ್ಲಿಯೂ ಹೇಳಿಲ್ಲ. ಪ್ರತಿವಾದಿಗಳಿಗೆ ಯಾವುದೇ ಇಲಾಖೆ ನೀಡಿ ಸರ್ಕಾರದ ಜವಾಬ್ದಾರಿ ವಹಿಸಿಲ್ಲ’ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.