ADVERTISEMENT

ಎಟಿಎಂ ಯಂತ್ರ ಕತ್ತರಿಸಿ ₹ 27 ಲಕ್ಷ ಕಳವು; ಎಫ್‌ಐಆರ್‌ ದಾಖಲು

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 19:30 IST
Last Updated 10 ಆಗಸ್ಟ್ 2020, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಜಾಲಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಎಟಿಎಂ ಘಟಕವೊಂದರ ಯಂತ್ರವನ್ನು ಕತ್ತರಿಸಿ ₹ 27 ಲಕ್ಷ ಕಳವು ಮಾಡಿದ್ದಾರೆ.

‘ಈ ಸಂಬಂಧ ಕೆನರಾ ಬ್ಯಾಂಕ್ ಅಧಿಕಾರಿ ಠಾಣೆಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಠಾಣೆ ವ್ಯಾಪ್ತಿಯ ಎಂಇಎಸ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಘಟಕವಿದೆ. ಭಾನುವಾರ ತಡರಾತ್ರಿ ಘಟಕದ ಸುತ್ತಮುತ್ತ ಜನರ ಓಡಾಟವಿರಲಿಲ್ಲ. ಇದೇ ಸಂದರ್ಭದಲ್ಲಿ ದುಷ್ಕರ್ಮಿಗಳು, ಘಟಕದೊಳಗೆ ನುಗ್ಗಿ ಕೃತ್ಯ ಎಸಗಿದ್ದಾರೆ.’

ADVERTISEMENT

‘ಘಟಕದೊಳಗೆ ಹೋಗುತ್ತಿದ್ದಂತೆ ದುಷ್ಕರ್ಮಿಗಳು ಸಿ.ಸಿ.ಟಿ.ವಿ ಕ್ಯಾಮೆರಾವನ್ನು ನಿಷ್ಕ್ರಿಯಗೊಳಿಸಿದ್ದಾರೆ. ನಂತರ, ಎಟಿಎಂ ಯಂತ್ರವನ್ನು ಗ್ಯಾಸ್‌ ಕಟರ್‌ನಿಂದ ಕತ್ತರಿಸಿ ಅದರಲ್ಲಿದ್ದ ಹಣದ ಸಮೇತ ಪರಾರಿಯಾಗಿದ್ದಾರೆ. ಸೋಮವಾರ ಬೆಳಿಗ್ಗೆ ಸಾರ್ವಜನಿಕರೊಬ್ಬರು ಹಣ ಪಡೆಯಲು ಎಟಿಎಂ ಘಟಕಕ್ಕೆ ಹೋದಾಗ ವಿಷಯ ಗೊತ್ತಾಗಿದೆ’ ಎಂದೂ ಪೊಲೀಸರು ತಿಳಿಸಿದರು.

‘ಘಟಕದಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ದುಷ್ಕರ್ಮಿಗಳು ವ್ಯವಸ್ಥಿತವಾಗಿ ಕೃತ್ಯ ಎಸಗಿದ್ದಾರೆ. ಬ್ಯಾಂಕ್‌ ಅಧಿಕಾರಿಗಳು ಹಾಗೂ ಘಟಕದ ಭದ್ರತಾ ಉಸ್ತುವಾರಿ ವಹಿಸಿದ್ದವರ ಹೇಳಿಕೆ ಪಡೆದು ತನಿಖೆ ಮುಂದುವರಿಸಲಾಗಿದೆ’ ಎಂದೂ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.