
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ಸಂಸ್ಥೆಯು ನಿರುದ್ಯೋಗಿ ಯುವಕ–ಯುವತಿಯರಿಗೆ ಉಚಿತವಾಗಿ ಕಂಪ್ಯೂಟರ್ ತರಬೇತಿ ಶಿಕ್ಷಣವನ್ನು 2026ರ ಜನವರಿ 1ರಿಂದ ಆರಂಭಿಸಲಿದೆ.
ತರಬೇತಿ ಅವಧಿ ಮೂರು ತಿಂಗಳಾಗಿದ್ದು, 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತರಬೇತಿಗೆ ಹಾಜರಾಗಲು ಬಯಸುವವರು ಮಲ್ಲೇಶ್ವರದಲ್ಲಿರುವ ಕೆನರಾ ಬ್ಯಾಂಕ್‌ನ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.
ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಷನ್, ಟ್ಯಾಲಿ, ಡೆಸ್ಕ್ ಟಾಪ್ ಪಬ್ಲಿಷಿಂಗ್, ಹಾರ್ಡ್‌ವೇರ್ ಹಾಗೂ ನೆಟ್‌ವರ್ಕ್ ಅಡ್ಮಿನಿಸ್ಟ್ರೇಷನ್ ಇತ್ಯಾದಿ ವಿಷಯಗಳಲ್ಲಿ ತರಬೇತಿ ನೀಡಲಾಗುತ್ತದೆ. ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ. ಪಿಯುಸಿ. ಐಟಿಐ, ಡಿಪ್ಲೊಮಾ, ಪದವಿ ಮುಗಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಮಾಹಿತಿಗೆ ಸಂಪರ್ಕ ಸಂಖ್ಯೆ: 9448538107, 080–23440036
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.