ADVERTISEMENT

ಕೆನರಾ ಬ್ಯಾಂಕ್‌ನಲ್ಲಿ ಕನ್ನಡ ರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2023, 15:53 IST
Last Updated 18 ಡಿಸೆಂಬರ್ 2023, 15:53 IST
<div class="paragraphs"><p>ಬೆಂಗಳೂರಿನ ಕೆನರಾ ಬ್ಯಾಂಕ್‌ನ ಪ್ರಧಾನ ಕಾರ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕನ್ನಡ ರಾಜ್ಯೋತ್ಸವದ ಸುವರ್ಣ ಸಂಭ್ರಮಾಚರಣೆ</p></div>

ಬೆಂಗಳೂರಿನ ಕೆನರಾ ಬ್ಯಾಂಕ್‌ನ ಪ್ರಧಾನ ಕಾರ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕನ್ನಡ ರಾಜ್ಯೋತ್ಸವದ ಸುವರ್ಣ ಸಂಭ್ರಮಾಚರಣೆ

   

ಬೆಂಗಳೂರು: ಬೆಂಗಳೂರಿನ ಕೆನರಾ ಬ್ಯಾಂಕ್‌ನ ಪ್ರಧಾನ ಕಾರ್ಯಾಲಯದಲ್ಲಿ ಇತ್ತೀಚೆಗೆ ಕನ್ನಡ ರಾಜ್ಯೋತ್ಸವದ ಸುವರ್ಣ ಸಂಭ್ರಮಾಚರಣೆ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ. ಸತ್ಯನಾರಾಯಣ ರಾಜು ಮಾತನಾಡಿ, ‘ಕನ್ನಡಿಗರು ಹೃದಯ ವೈಶಾಲ್ಯ ಹೊಂದಿದ್ದಾರೆ. ದೇಶದ ಪ್ರಗತಿಯಲ್ಲಿ ಕರ್ನಾಟಕದ ಪಾಲು ದೊಡ್ಡದಿದೆ’ ಎಂದರು.

ADVERTISEMENT

ಕೆನರಾ ಬ್ಯಾಂಕ್‌ನ ಮುಖ್ಯ ಕಾರ್ಯಾಲಯವು ಬೆಂಗಳೂರಿನಲ್ಲಿದೆ. ಇಲ್ಲಿ ಕನ್ನಡೇತರರಿಗೆ ಕನ್ನಡ ಭಾಷೆಯ ಕಲಿಕೆಗೆ ಅನುಕೂಲವಾಗುವಂತಹ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಾಹಿತಿ ಡಾ.ಆರತಿ ವಿ.ಬಿ. ಮಾತನಾಡಿ, ಪ್ರಾದೇಶಿಕತೆಯ ಜೊತೆಗೆ ಭಾರತೀಯತೆಯನ್ನು ಬೆಳೆಸಿಕೊಳ್ಳಬೇಕಾದ ಅಗತ್ಯತೆ ಬಗ್ಗೆ ಒತ್ತಿ ಹೇಳಿದರು.

ಕನ್ನಡದ ರಾಜಮನೆತನಗಳು ಕಲೆ, ಸಂಸ್ಕೃತಿ ಮೂಲಕ ಭಾರತದಾದ್ಯಂತ ತಮ್ಮ ಅಸ್ಮಿತೆಯನ್ನು ಇಂದಿಗೂ ಉಳಿಸಿ ಹೋಗಿವೆ ಎಂದರು.

ನಾವೆಲ್ಲರೂ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಂಡು ಭಾರತೀಯತೆಯನ್ನು ವಿಶ್ವಮಟ್ಟದಲ್ಲಿ ಪ್ರಚುರಪಡಿಸಬೇಕಿದೆ ಎಂದು ಸಲಹೆ ನೀಡಿದರು. 

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು. ಬ್ಯಾಂಕ್‌ನ ಕಾರ್ಯ ನಿರ್ವಾಹಕ ನಿರ್ದೇಶಕರಾದ ದೇಬಾಶಿಶ್ ಮುಖರ್ಜಿ, ಅಶೋಕ ಚಂದ್ರ, ಭವೇಂದ್ರ ಕುಮಾರ್ ಉಪಸ್ಥಿತರಿದ್ದರು. ಮುಖ್ಯ ಮಹಾ ಪ್ರಬಂಧಕ ಕೆ.ಜೆ. ಶ್ರೀಕಾಂತ ಸ್ವಾಗತಿಸಿದರು. ಶ್ರೀವಿದ್ಯಾ ನಿರೂಪಿಸಿದರು. ಮಹಾಪ್ರಬಂಧಕ ರಾಮನಾಯ್ಕ್‌ ವಂದಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.