ADVERTISEMENT

ದೀಪದ ನೆಪದಲ್ಲಿ ಗುಂಪು ಸೇರಿದರೆ ಶಿಸ್ತುಕ್ರಮ; ಕಮಿಷನರ್

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 2:15 IST
Last Updated 5 ಏಪ್ರಿಲ್ 2020, 2:15 IST
ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್   

ಬೆಂಗಳೂರು: ಕೊರೊನಾ ವೈರಾಣು ಹರಡುವಿಕೆ ತಡೆಗಾಗಿ ದೇಶದಾದ್ಯಂತ ಲಾಕ್‌ಡೌನ್ ಮಾಡಲಾಗಿದೆ. ಇಂದು ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಹಚ್ಚುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಇದೇ ನೆಪದಲ್ಲಿ ಜನ ಮನೆಯಿಂದ ಹೊರಗೆ ಬಂದು ಗುಂಪು ಸೇರುವಂತಿಲ್ಲವೆಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಸಿದ್ದಾರೆ.

ದೀಪ ಹಚ್ಚುವ ನೆಪದಲ್ಲಿ ಯಾರಾದರೂ ಮನೆಯಿಂದ ಹೊರಗೆ ಬಂದು ಗುಂಪು ಸೇರಿದರೆ, ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆಯೂ ಎಲ್ಲ ಠಾಣೆಗಳ ಪೊಲೀಸರಿಗೆ ಭಾಸ್ಕರ್ ರಾವ್ ಸಂದೇಶ ರವಾನಿಸಿರುವುದಾಗಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT