ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಕಡೆಗೆ ತಿರುವು ತೆಗೆದುಕೊಳ್ಳುವಾಗ ಅನಿಲ್ ಕುಂಬ್ಳೆ ವೃತ್ತದ ಬಳಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದರಿಂದ ಸುಮಾರು 45 ನಿಮಿಷ ಸಂಚಾರ ವ್ಯತ್ಯಯಗೊಂಡಿತು.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಾರು ತೆರವು ಕಾರ್ಯಾಚರಣೆ ವಿಳಂಬವಾಗಿ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಮಹಾತ್ಮ ಗಾಂಧಿ ವೃತ್ತದಿಂದ ಬೈಬಲ್ ಸೊಸೈಟಿ ಆಫ್ ಇಂಡಿಯಾ ಕಟ್ಟಡದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಕಾರು ಚಾಲನೆ ಮಾಡುತ್ತಿದ್ದ ಐ.ಟಿ ಉದ್ಯೋಗಿ ಗೌರವ್ ಸಿಂಗ್, ‘ಬ್ರೇಕ್ ಬದಲು ಆಕಸ್ಮಿಕವಾಗಿ ಆಕ್ಸಿಲರೇಟರ್ ಒತ್ತಿದೆ. ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆಯಿತು. ಟೈರ್ ಸಹ ಸ್ಫೋಟಗೊಂಡಿದೆ’ ಎಂದು ಹೇಳಿದರು.
ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಟೋಯಿಂಗ್ಮೂ ಲಕ ಕಾರು ತೆಗೆದುಕೊಂಡು ಹೋಗಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.