ಅಪಘಾತ
ಸಾಂದರ್ಭಿಕ ಚಿತ್ರ
ಬೆಂಗಳೂರು: ತಲಘಟ್ಟಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರು ಹಾಗೂ ಸರಕು ಸಾಗಣೆ ಆಟೊದ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ.
ಪಾವಗಡದ ರಘುಪ್ರಸಾದ್ (28) ಮೃತಪಟ್ಟ ಕಾರು ಚಾಲಕ. ರಘುಪ್ರಸಾದ್ ಅವರು ಲಗ್ಗೆರೆಯಲ್ಲಿ ನೆಲಸಿದ್ದರು ಎಂದು ಸಂಚಾರ ಪೊಲೀಸರು ಹೇಳಿದರು.
ನೈಸ್ ರಸ್ತೆಯ ಇನ್ವಿಟೆಕ್ ಗೇಟ್ ಸಮೀಪ ಮಂಗಳವಾರ ರಾತ್ರಿ, ಸರಕು ಸಾಗಣೆಯ ವಾಹನವು ಮುಂದೆ ಚಲಿಸುತ್ತಿತ್ತು. ರಘು ಪ್ರಸಾದ್ ಅವರು ಕಾರು ಚಾಲನೆ ಮಾಡಿಕೊಂಡು ತೆರಳುತ್ತಿದ್ದರು. ಸರಕು ಸಾಗಣೆಯ ವಾಹನವನ್ನು ಹಿಂದಿಕ್ಕುವಾಗ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ರಘು ಪ್ರಸಾದ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.
ಅತಿವೇಗವಾಗಿ ಕಾರನ್ನು ಚಾಲನೆ ಮಾಡಿದ್ದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.